ಜೆಡಿಎಸ್ ಸಂಗ ಮಾಡುತ್ತಾ ಬಿಜೆಪಿ? ಅಮಿತ್ ಶಾ ಹೇಳಿದ್ದೇನು?

ಬುಧವಾರ, 28 ಮಾರ್ಚ್ 2018 (09:39 IST)
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಯಾವುದಾದರೊಂದು ಪಕ್ಷ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಈ ಬಗ್ಗೆ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಮಗೆ ಜೆಡಿಎಸ್ ನ ಸಹವಾಸವೇ ಬೇಡ. ಯಾವುದೇ ಕಾರಣಕ್ಕೂ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಯೋಚನೆಯಿಲ್ಲ. ನಮ್ಮ ಪಕ್ಷಕ್ಕೆ ಬಹುಮತ ಬರುತ್ತೆ. ಯಡಿಯೂರಪ್ಪ ನೇತೃತ್ವದಲ್ಲಿ ನಮ್ಮದೇ ಬಹುಮತದ ಸರ್ಕಾರ ರಚಿಸುತ್ತೇವೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಒಂದೆಡೆ ಜೆಡಿಎಸ್ ವರಿಷ್ಠ ದೇವೇಗೌಡ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೆಡಿಎಸ್ ನ್ನು ಬಿಜೆಪಿಯ ಬಿ ಟೀಂ ಎಂದು ಟೀಕಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಮಿತ್ ಶಾ ಮಾಧ್ಯಮಗಳ ಎದುರು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ