ಯಾರ ಜತೆಗೂ ಮೈತ್ರಿ ಮಾಡಿಕೊಳ್ಳಲ್ಲ, ನಾವೇ ಗೆಲ್ಲುತ್ತೇವೆ: ಅಮಿತ್ ಶಾ
ಶುಕ್ರವಾರ, 11 ಮೇ 2018 (08:06 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಅತಂತ್ರ ಸ್ಥಿತಿ ನಿರ್ಮಾಣವಾದಲ್ಲಿ ಬಿಜೆಪಿ ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಬಹುದು ಎಂಬ ಊಹಾಪೋಹಗಳಿಗೆ ಅವರು ಈ ಮೂಲಕ ತೆರೆ ಎಳೆದಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಯಾವುದೇ ಪಕ್ಷವೂ ಬಹುಮತ ಗಳಿಸಲಾರದು. ಹಾಗಿದ್ದಾಗ ಈ ಎರಡೂ ಪಕ್ಷಗಳು ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.
ಆದರೆ ಈಗಾಗಲೇ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲ್ಲ ಎಂದಿದೆ. ಇದೀಗ ಬಿಜೆಪಿ ಕೂಡಾ ಜೆಡಿಎಸ್ ಗೆ ನೋ ಎಂದಿದೆ. ಜೆಡಿಎಸ್ ಕೂಡಾ ಯಾವುದೇ ಪಕ್ಷದ ಜತೆಗೂ ಹೊಂದಾಣಿಕೆ ಇಲ್ಲ ಎಂದಿದೆ.
ನಾವೇ 130 ಪ್ಲಸ್ ಸ್ಥಾನ ಗೆಲ್ಲುತ್ತೇವೆ. ಹಾಗಾಗಿ ಬೇರೆ ಯಾವುದೇ ಪಕ್ಷದ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸದು ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.