ಅಮೂಲ್ ವರ್ಸಸ್ ನಂದಿನಿ ಸಮರ ತಾರಕಕ್ಕೇರಿದೆ. ಅಮುಲ್ ಹಾಲು ಮತ್ತು ಮೊಸರು ಬೆಂಗಳೂರಿನಲ್ಲಿ ಮಾರಾಟವಾಗುತ್ತದೆ ಎಂದ ಬೆನ್ನಲ್ಲೇ ವ್ಯಾಪಕ ಆಕ್ರೋಶ ಕೇಳಿಬಂದಿತ್ತು. ರಾಜಕೀಯ ಪಕ್ಷಗಳ ಕಿತ್ತಾಟ...ಜಾಲತಾಣದಲ್ಲಿ ಸೇವ್ ನಂದಿನಿ, ಗೋ ಬ್ಯಾಕ್ ಅಮುಲ್ ಅಭಿಯಾನದ. ಈ ನಡುವೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿದೆ.ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಮೈಸೂರು ಬ್ಯಾಂಕ್ ವೃತ್ತದ ಬಳಿ ಅಮುಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮುಲ್ ಉತ್ಪನ್ನಗಳಾದ ಬೀದಿಗೆಸೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು... ಯಾವುದೇ ಕಾರಣಕ್ಕೂ ಅಮುಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟಿಸಿದ್ದಾರೆ.
ನಂದಿನಿಯನ್ನು ಅಮುಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಇಂಥದ್ದೇನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದಾರೆ. ಅಮುಲ್ ಹಠಮಾರಿತನ ಮುಂದುವರಿಸಿ ಹಾಲು-ಮೊಸರು ವ್ಯಾಪಾರ ಮುಂದುವರಿಸಿದರೆ ಕರ್ನಾಟಕದಲ್ಲಿ ಅಮುಲ್ ನ ಎಲ್ಲ ಉತ್ಪನ್ನಗಳಿಗೂ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ.
ತಿಭಟನೆ ವೇಳೆ ಅಮುಲ್ ಪ್ರತಿಕೃತಿ ದಹನ ಮಾಡಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ವಿರೋಧದ ನಡುವೆಯೂ ಪ್ರತಿಕೃತಿ ದಹನಕ್ಕೆ ಮುಂದಾದ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ್ರು. ಈ ವೇಳೆ ಹೈಡ್ರಾಮಾವೂ ನಡೆಯಿತು. ಒಟ್ಟಾರೆ ಚುನಾವಣೆ ವೇಳೆ ರಾಜ್ಯದಲ್ಲಿ ಶುರುವಾದ ಅಮುಲ್ ಹಾಗೂ ನಂದಿನಿ ವಾರ್ ತಾರಕ್ಕೇರಿದೆ. ಅಮೂಲ್ ನೇರವಾಗಿ ತನ್ನ ಹಾಲಿನ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಲು ಮುಂದಾಗಿರೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕೀಯ ನಾಯಕರ ನಡುವೆ ವಾಗ್ವದಕ್ಕೂ ಕಾರಣವಾಗಿದೆ. ವಿರೋಧದ ನಡುವೆ ಅಮುಲ್ ರಾಜ್ಯದಲ್ಲಿ ಹಾಲು-ಮೊಸರು ಮಾರಟ ಸ್ಥಗಿತ ಅನ್ನುವುದೇ ಕುತೂಹಲಕಾರಿ ವಿಚಾರ