ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ

ಸೋಮವಾರ, 12 ಜೂನ್ 2023 (18:49 IST)
ಅಲೆಮಾರಿ ಜನಾಂಗಕ್ಕೆ ಸೇರಿದ 93  ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದೆ.
 
ಕುಮಾರ ಕೃಪ ಅತಿಥಿ ಗೃಹದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜತೆ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿ ಮಾಡಿದ ದ್ವಾರಕನಾಥ್ ಅವರು  ಈ ಸಮುದಾಯಗಳ ಸಮಸ್ಯೆ ಹಾಗೂ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚೆ ಮಾಡಿದರು.
 
ಕಳೆದ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಮನವಿ ಮಾಡಿದರು. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ  ಮಹಾದೇವಪ್ಪ ಅವರನ್ನ ಭೇಟಿ ಮಾಡುವಂತೆ ಡಿಸಿಎಂ ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ