Good News: ಅಳಿವಿನಂಚಿನಲ್ಲಿರುವ ಬೂದು ತೋಳ ಬಂಕಾಪುರ ತೋಳಧಾಮದಲ್ಲಿ ಹೆಚ್ಚಳ

Sampriya

ಶುಕ್ರವಾರ, 14 ಫೆಬ್ರವರಿ 2025 (17:14 IST)
Photo Courtesy X
ಬೆಂಗಳೂರು: ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ತೋಳವೊಂದು ಐದು ಮರಿಗಳಿಗೆ ಜನ್ಮ ನೀಡಿದ್ದು, ಈ ಮೂಲಕ ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಸುರಕ್ಷಿತ ತಾಣವಾಗಿರುವುದರಿಂದ ತೋಳಗಳ ಸಂತತಿ ಹೆಚ್ಚಳವಾಗುವುದಕ್ಕೂ ಇದು ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ ಎಂದರು.

ಇದೀಗ ಐದು ಮರಿಗಳಿಗೆ  ತೋಳ ಜನ್ಮ ನೀಡುವ ಮೂಲಕ ಬೂದು ತೋಳಗಳ ಸಂಖ್ಯೆ 40-45 ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ