ಶಿಕ್ಷಕಿಯ ದೌರ್ಜನ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ ಕೆಜಿ ವಿದ್ಯಾರ್ಥಿ

ಗುರುವಾರ, 29 ಆಗಸ್ಟ್ 2019 (12:31 IST)
ಹಾಸನ : ಶಿಕ್ಷಕಿಯ ದೌರ್ಜನ್ಯಕ್ಕೆ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಹೊರವಲಯದ ಎಲ್‍ ವಿಜಿಎಸ್ ಶಾಲೆಯಲ್ಲಿ ಅಗಸ್ಟ್ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗಿರಿಜಾ ಎಂಬುವವರು ಎಲ್‍ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ  ಮನಿಷ್ ಎಂಬ ವಿದ್ಯಾರ್ಥಿಯ ಕಣ್ಣಿಗೆ ಕಬ್ಬಿಣದ ಸ್ಕೇಲ್‍ ನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಣ್ಣು ನೋವಿನಿಂದ ಬಳಲುತ್ತಿದ್ದ.

 

ಈ ಹಿನ್ನಲೆಯಲ್ಲಿ ವೈದ್ಯರ ಬಳಿ ಚಿಕಿತ್ಸೆಗೆ ಪೋಷಕರು ವಿದ್ಯಾರ್ಥಿಯನ್ನು ಕರೆದುಕೊಂಡ ಹೋದಾಗ ಆತನ ಕಣ್ಣಿಗೆ ಬಲವಾಗಿ ಹಾನಿಯಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಆದಕಾರಣ ಶಿಕ್ಷಕಿಯ ವಿರುದ್ಧ ರೊಚ್ಚಿಗೆದ್ದ ಪೋಷಕರು ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ