ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ
ದೂರಿನ ಪ್ರಕಾರ, ಹುಚ್ಚಮ್ಮ ಎಂಬ ವೃದ್ಧೆ, ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದರು. ಈ ಸಣ್ಣ ವಿಷಯಕ್ಕೆ ಕೋಪಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮನವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಮರಕ್ಕೆ ಹಗ್ಗದಿಂದ ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.