ವಿದೇಶಕ್ಕೆ ಹಾರಲು ಯತ್ನ ತಡೆಯಲು ರೇವಣ್ಣಗೆ ಔಟ್ ನೊಟೀಸ್ ಜಾರಿ

Sampriya

ಶುಕ್ರವಾರ, 3 ಮೇ 2024 (20:51 IST)
ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಇದೀಗ ಅವರ ತಂದೆ ಮಾಜಿ ಸಚಿವ  ಹೆಚ್.ಡಿ.ರೇವಣ್ಣ ವಿರುದ್ದವೂ ಕರ್ನಾಟಕದ ವಿಶೇಷ ತನಿಖಾ ದಳ (ಎಸ್‌ಐಟಿ) ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ.

ರೇವಣ್ಣ ದೇಶ ಬಿಟ್ಟು ಹೊಗುವುದನ್ನ ತಡೆಯುವ ಸಲುವಾಗಿ ಎಲ್‌ಒಸಿ ನೊಟೀಸ್ ನೀಡಿದೆ. ಎಸ್ಐಟಿ ಯಿಂದ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಪ್ರಕರಣ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ವಿದೇಶಕ್ಕೆ ಹಾರುವ ಯತ್ನ ತಡೆಯಲು ಮುಂದಾದ ಎಸ್ಐಟಿ ಈ ನೊಟೀಸ್‌ ಜಾರಿ ಮಾಡಿದೆ.

ಈಗಾಗಲೇ ಎಚ್ ಡಿ ರೇವಣ್ಣ ಅವರು ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ನಾಳೆ ಇದರ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಲಿದೆ. ನಾಳೆ ರೇವಣ್ಣ ಎಸ್‌ಐಟಿ ವಿಚಾರಣೆಗೆ ಹಾಜರಾಗಲಿದ್ದಾರೆಂದು ಅವರ ಪರ ವಕೀಲ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅವರು ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ