ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

Sampriya

ಬುಧವಾರ, 27 ಆಗಸ್ಟ್ 2025 (17:33 IST)
ಮಂಗಳೂರು: ಧರ್ಮಸ್ಥಳದಲ್ಲಿ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಟ್ಟ ಬುರುಡೆ ಪ್ರಕರಣದಲ್ಲಿ ಇದೀಗ ಎಸ್‌ಐಟಿ ತಂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ಕಾರ್ಯ ನಡೆಸಿದೆ. 

ಅರೆಸ್ಟ್ ಆಗಿರುವ ಚಿನ್ನಯ್ಯ ನೀಡಿದ ಮಾಹಿತಿ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆಯಿಂದ ಮೂರು ತಲವಾರು ವಶಕ್ಕೆ ಪಡೆದಿದ್ದಾರೆ.

ನಿನ್ನೆ (ಆ.26) ತಡ ರಾತ್ರಿವರೆಗೂ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಜಾಲಾಡಿದ್ದಾರೆ. ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ವರದಿಯಲ್ಲಿ ದಾಖಲಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ