ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

Sampriya

ಗುರುವಾರ, 15 ಮೇ 2025 (18:19 IST)
Photo Credit X
ಬೆಂಗಳೂರು: ಖ್ಯಾತ ಜ್ಯೋತಿಷ್ಯಿ ಆನಂದ ಗುರೂಜಿಗೆ ಕಾರು ಅಡ್ಡಕಟ್ಟಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡಿ, ಜೀವಬೆದರಿಕೆ ಹಾಕಿದ ಆರೋಪದಡಿ ನಿರೂಪಕಿ ದಿವ್ಯ ವಸಂತ ಹಾಗೂ ಕೃಷ್ಣಮೂರ್ತಿ ವಿರುದ್ಧ ದೂರು ದಾಖಲಾಗಿದೆ.

ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ಕೋರ್ಟ್​ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ವಿನಯ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬ್ಲ್ಯಾಕ್‌ಮೇಲ್‌ನಲ್ಲಿ ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ ಗಳ ಮೂಲಕ ಮಾನಹಾನಿ ಮಾಡಿದ್ದಾರೆ. ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್ ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕೃಷ್ಣಮೂರ್ತಿ ಎ1 ಆರೋಪಿಯಾಗಿದ್ದರೆ, ದಿವ್ಯಾ ವಸಂತ ಎ2 ಆರೋಪಿಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ