ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವ ಶಪಥಗೈದ ಆನಂದಸಿಂಗ್
ಶುಕ್ರವಾರ, 9 ಫೆಬ್ರವರಿ 2018 (10:14 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳು ಪಡೆದು ಗೆಲುವು ಸಾಧಿಸುವುದಾಗಿ ಮಾಜಿ ಶಾಸಕ ಆನಂದ ಸಿಂಗ್ ಅವರು ಶಪಥ ಮಾಡಿದ್ದಾರೆ.
ಶಾಸಕ ಸ್ಥಾನ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವ ಅವರು ಕಳೆದ ಕೆಲ ತಿಂಗಳುಗಗಳಿಂದ ಮನೆಗೂ ಹೋಗದೇ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಕಳೆದ ಚುನಾವಣೆಯಲ್ಲಿ 70 ಸಾವಿರ ಮತಗಳಿಂದ ಗೆಲುವು ಸಾಧಿಸಿರುವ ಅವರು, ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿಯೇ ಮನೆಗೆ ಹೋಗುತ್ತೇನೆ ಎಂದು ಶಪಥ ಮಾಡಿದ್ದಾರೆ.
ಅಕ್ಟೋಬರ್ 4ರಂದು ಜನ್ಮದಿನ ಆಚರಣೆ ಮಾಡಿಕೊಂಡ ನಂತರ ಪುನಃ ಮನೆಗೆ ಹೋಗಿಲ್ಲ. ಕುಟುಂಬದವರು ಕೂಡ ಆನಂದ ಸಿಂಗ್ ಇರುವ ಸ್ಥಳಕ್ಕೆ ಹೋಗಿ ಭೇಟಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.