ಅನಂತ್ ಕುಮಾರ್ ನಿಧನರಾದ ಹಿನ್ನಲೆ; ಖಾಲಿಯಾಗಿದ್ದ ಖಾತೆಗಳ ಹಂಚಿಕೆ ಮಾಡಿದ ಪ್ರಧಾನಿ

ಬುಧವಾರ, 14 ನವೆಂಬರ್ 2018 (12:29 IST)
ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾದ ಹಿನ್ನಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ಖಾತೆಯ ಜವಬ್ದಾರಿಯನ್ನು ಬೇರೆಯವರಿಗೆ ನೀಡಲಾಗಿದೆ.

ಕೇಂದ್ರ ಸಚಿವ ಅನಂತ್ ಕುಮಾರ್ ಅವರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ನಿರ್ವಹಿಸುತ್ತಿದ್ದರು. ಇದೀಗ ಅವರು ನಿಧನರಾದ ಕಾರಣ ಖಾಲಿಯಾಗಿದ್ದ ಖಾತೆಗಳ ಹಂಚಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಫಾರಸ್ಸು ಹೊರಡಿಸಿದ್ದು,  ಅದಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

 

ಆ ಮೂಲಕ ಸ್ಯಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನಗಳ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ವಹಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ಥೋಮರ್ ಅವರಿಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ