ಸಾಹಿತಿ ಅನಂತಮೂರ್ತಿ ಸ್ಥಿತಿ ಗಂಭೀರ: ವೆಂಟಿಲೇಟರ್ ಚಿಕಿತ್ಸೆ

ಶುಕ್ರವಾರ, 22 ಆಗಸ್ಟ್ 2014 (11:38 IST)
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದರಿಂದ ಅವರಿಗೆ ಐಸಿಯುನಲ್ಲಿ  ವೆಂಟಿಲೇಟರ್ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಎರಡು ಮೂರುದಿನಗಳಿಂದ ಅವರ ಆರೋಗ್ಯ ಏರುಪೇರಾಗಿದೆ. ಸದ್ಯಕ್ಕೆ ಅವರ ಆರೋಗ್ಯದ ಬಗ್ಗೆ ಭಯಪಡಬೇಕಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆಗೆ ಸಂಬಂಧಿಸಿದಂತೆ ಡಯಾಲಿಸಿಸ್ ಕೂಡ ಅನಂತಮೂರ್ತಿ ಮಾಡಿಸಿಕೊಳ್ಳುತ್ತಿದ್ದರು.

ಅನಂತಮೂರ್ತಿ ಖ್ಯಾತ ಸಾಹಿತಿಯಾಗಿದ್ದು, 1998ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.  1980ರ ದಶಕದಲ್ಲಿ ಕೇರಳದ ಮಹಾತ್ಮ ಗಾಂಧಿ ವಿವಿಯ ಉಪಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. 

ವೆಬ್ದುನಿಯಾವನ್ನು ಓದಿ