ಪುರಾತನ ಶಿಕ್ಷಣ ವ್ಯವಸ್ಥೆ ಅತ್ಯಂತ ಶ್ರೀಮಂತವಾಗಿದೆ : ಗೆಹ್ಲೋಟ್

ಗುರುವಾರ, 23 ಫೆಬ್ರವರಿ 2023 (09:24 IST)
ಬೆಂಗಳೂರು : ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ನಮ್ಮಲ್ಲಿರುವ ಜ್ಞಾನವನ್ನು ಯಾರೂ ಕದಿಯಲು ಸಾಧ್ಯವಿಲ್ಲ.

ಜ್ಞಾನ ಪಡೆದುಕೊಂಡರೆ ಸಾಧನೆಗೆ ದಾರಿ ಸುಲಭವಾಗಲಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದಲ್ಲಿ ಸಿಎಂಆರ್ ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ನಡೆದ ಸಿಎಂಆರ್ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಮಹತ್ತರವಾದ ಕೊಡುಗೆಯನ್ನು ಹೊಂದಿದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಒಬ್ಬ ವ್ಯಕ್ತಿಯು ಶಿಕ್ಷಣ ಪಡೆದಾಗ ಮಾತ್ರ ಅವನ ಅಭಿವೃದ್ಧಿಯಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ