ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅಂದರ್

ಸೋಮವಾರ, 28 ನವೆಂಬರ್ 2022 (20:47 IST)
ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಇದುವರೆಗೂ‌ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.ಪ್ರಕರಣ ಪ್ರಮುಖ ಆರೋಪಿ ರವಿಕುಮಾರ್ ಜೊತೆ ಆಪ್ತ ಹಾಗೂ ಅನಿಲ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಮಹದೇವಪುರದಲ್ಲಿ ಚಿಲುಮೆ ಕಚೇರಿಯ ಉಸ್ತುವಾರಿವಹಿಸಿಕೊಂಡಿದ್ದ‌. ಹಲವು ವರ್ಷಗಳಿಂದ ರವಿಕುಮಾರ್ ಜೊತೆ ಗುರುತಿಸಿಕೊಂಡಿದ್ದ. ನೌಕರರ ನೇಮಕ ಹಾಗೂ‌ ಲಾಜಿಸ್ಟಿಕ್ ವರ್ಕ್ ಸೇರಿದಂತೆ ಎಲ್ಲವೂ ಈತನ ಅಧೀನದಲ್ಲೆ ನಡೆಯುತಿತ್ತು‌‌.
 
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅನಿಲ್ ತಲೆಮರೆಸಿಕೊಂಡಿದ್ದ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಬಿಬಿಎಂಪಿ ಅಧಿಕಾರಿಗಳನ್ನು ಬಂಧಿಸಿ ಮೂರು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಹಿರಿಯ ಅಧಿಕಾರಿಗಳು ಸಹಮತದಲ್ಲೇ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಬೆನ್ನಲೇ ಸಂಬಂಧಪಟ್ಟ ಐಎಎಸ್ ಅಧಿಕಾರಿಗಳನ್ನು ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
 
ಪೊಲೀಸ್ ಕಸ್ಟಡಿಯಲ್ಲಿರುವ ರವಿಕುಮಾರ್ ಚಿಲುಮೆ  ಸಂಸ್ಥೆ ಹಾಗೂ ಬ್ಯಾಂಕ್ ಖಾತೆಗಳ ಹಣಕಾಸಿನ ವ್ಯವಹಾರಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ‌. ಆರೋಪಿಗಳ ಖಾತೆಯಿಂದ ಬಿಬಿಎಂಪಿ ಅಧಿಕಾರಿಗಳ ಬ್ಯಾಂಕ್ ಖಾತೆಗಳಿಗೆ ಹಣ ಸಂದಾಯವಾಗಿದೆ ಎಂಬುದರ ಬಗ್ಗೆಯು ಅಧಿಕಾರಿಗಳ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ