ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ ಅಂದರ್

ಶನಿವಾರ, 15 ಅಕ್ಟೋಬರ್ 2022 (10:59 IST)
ಚಿಕ್ಕಮಗಳೂರು : ದಂಡ ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ.

ನ್ಯಾಯಧೀಶರ ಮೇಲೆ ಚಪ್ಪಲಿ ತೂರಿದ ಅರವಿಂದ ನಗರ ನಿವಾಸಿ ಲೋಕೇಶ್ನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಕಳೆದ 1 ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಬಳಿಕ ಪೊಲೀಸರು ಆತನಿಗೆ ಕೋರ್ಟ್ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದರು.

ಇದಕ್ಕೆ ಆರೋಪಿ ಲೋಕೇಶ್ ದಂಡ ಕೂಡ ಕಟ್ಟಿದ್ದ. ದಂಡ ಕಟ್ಟಿದ ತಿಂಗಳ ಬಳಿಕ ಲೋಕೇಶ್ ಇಂದು ಕೋರ್ಟ್ಗೆ ಕುಡಿದು ಬಂದು, ಜಡ್ಜ್ ಮೇಲೆ ಚಪ್ಪಲಿ ತೂರಿದ್ದಾನೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ