ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

ಮಂಗಳವಾರ, 21 ಮಾರ್ಚ್ 2017 (07:22 IST)
ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗಿಳಿದಿದ್ದಾರೆ. ಬೆಂಗಳೂರಿನ ಫ್ರೀಂಡಂಪಾರ್ಕ್`ನಲ್ಲಿ 5 ಸಾವಿರಕ್ಕೂ ಅಧಿಕ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ನಿನ್ನೆ ಕಾರ್ಯಕರ್ತೆಯರ ಭೇಟಿಗೆ ಬಂದಿದ್ದ ಸಚಿವೆ ಉಮಾಶ್ರೀ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಕಾರ್ಯಕರ್ತೆಯರು ಆರೋಪಿಸಿದ್ದಾರೆ. ದೂರದ ಊರುಗಳಿಂದ ಇಲ್ಲಿಗೆ ಬಂದಿರುವ ಕಾರ್ಯಕರ್ತೆಯರು ಕುಡಿಯುವ ನೀರು, ಶೌಚಾಲಯ ಸೌಲಭ್ಯವಿಲ್ಲದೆ ರಾತ್ರಿಯಿಡೀ ಪರಿತಪಿಸಿದ್ದಾರೆ.

ರಾತ್ರಿಯಿಡೀ ತಮ್ಮ ಪುಟ್ಟ ಮಕ್ಕಳ ಜೊತೆ ರಸ್ತೆಯಲ್ಲೇ ಮಲಗಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅಂಗನವಾಡಿ ಕಾರ್ಯಕರ್ತೆಯರ ನೋವನ್ನ ಾಲಿಸಿದ್ದಾರೆ. 2015ರಲ್ಲಿ ಕಾರ್ಯಕರ್ತೆಯರಿಗೆ ಕೊಟ್ಟ ಭರವಸೆಯನ್ನ ಸರ್ಕಾರ ಈಡೇರಿಸಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದರು.

ವೆಬ್ದುನಿಯಾವನ್ನು ಓದಿ