ಫೋಟೋಗಷ್ಟೇ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ತಾವೇ ಗುಳುಂ ಮಾಡುತ್ತಿದ್ದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ

Sampriya

ಶನಿವಾರ, 10 ಆಗಸ್ಟ್ 2024 (14:39 IST)
Photo Courtesy X
ಕೊಪ್ಪಳ: ಸರ್ಕಾರದಿಂದ ಕೊಡಲಾಗುವ ಮೊಟ್ಟೆಯನ್ನು ಅಂಗನವಾಡಿ ಮಕ್ಕಳ ತಟ್ಟೆಗೆ ಹಾಕಿ, ಫೋಟೋ ತೆಗೆದ ನಂತರ ವಾಪಾಸ್ ಕಸಿದುಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತುಗೊಳಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಅಂಗನವಾಡಿಯಲ್ಲಿ ಮಕ್ಕಳ ವಿತರಿಸುವ ಮೊಟ್ಟೆಯಲ್ಲಿ ವಂಚನೆ ಎಸಗಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.


ವಿಡಿಯೋ ವೈರಲ್‌: ವೈರಲ್ ಆದ ವಿಡಿಯೋದಲ್ಲಿ  ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ ನಂತರ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ಕಿತ್ತುಕೊಂಡಿದ್ದಾರೆ. ಒಂದು ಮಗು ಬಾಯಿಗೆ ಮೊಟ್ಟೆಯಿಡುವಷ್ಟರಲ್ಲಿ ಕಸಿದುಕೊಂಡಿರುವ  ಈ ಅಮಾನವೀಯ ಘಟನೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಚಾರ ತಿಳಿಯುತ್ತಿದ್ದ ಹಾಗೇ ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ