ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ನಿರ್ಧರಿಸಿದ ಮಾಜಿ ಶಾಸಕ ಅನಿಲ್ ಲಾಡ್

ಶುಕ್ರವಾರ, 27 ಸೆಪ್ಟಂಬರ್ 2019 (12:02 IST)
ಬಳ್ಳಾರಿ : ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಬಳ್ಳಾರಿ ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರೋ ಇಂಗಿತ ವ್ಯಕ್ತಪಡಿಸಿದ್ದು, ಬ್ರೂಸ್ ಪೇಟೆ ಬ್ಲಾಕ್ ಕಾಂಗ್ರೆಸ್ ವಾಟ್ಸಾಪ್ ಗ್ರೂಪ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ನಾನು ಕಾಂಗ್ರೆಸ್ ತೊರೆದು ಬಜೆಪಿಗೆ ಸೇರ್ಪಡೆಯಾಗೋಣ ಅಂತಿದ್ದೇನೆ. ನಿಮ್ಮ ಅಭಿಪ್ರಾಯ ತಿಳಿಸಿ’ ಎಂದು ಬ್ರೂಸ್ ಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಚರ್ಚೆ ನಡೆಸಿದ್ದಾರೆ.





 ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಇದೀಗ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ನಲ್ಲಿ ಅನಿಲ್ ಲಾಡ್ ರನ್ನು ಕಡೆಗಣಿಸಲಾಗಿದೆಯಾ ಅನ್ನೋ ಚರ್ಚೆ ಶುರುವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ