ಶೀಘ್ರವೇ ನಿಗಮ ಮಂಡಳಿ ನೇಮಕ- ಡಿ.ಕೆ.ಶಿ
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣಕರ್ತರಾದ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗಿದೆ. ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರ ಹೆಸರುಗಳನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದು DCM ಡಿ.ಕೆ ಶಿವಕಕುಮಾರ್ ಹೆಳಿದ್ಧಾರೆ.
ಫಸ್ಟ್ ಸರ್ಕಲ್ ಸೊಸೈಟಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ 3 ದಿನಗಳ ಉದ್ಯಮಿ ಒಕ್ಕಲಿಗ-2024 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಕ್ಕಲಿಗ ಸಮಾಜದ ಸಹಕಾರದಿಂದ ನಾನು ಉಪಮುಖ್ಯಮಂತ್ರಿ ಹುದ್ದೆಯವರೆಗೂ ಬಂದಿದ್ದೇನೆ. ಇದೇ ರೀತಿ ಸಮಾಜದ ಬೆಂಬಲ, ಸಹಕಾರ ಮುಂದುವರೆದರೆ ಇನ್ನಷ್ಟು ಎತ್ತರಕ್ಕೆ ಹೋಗುತ್ತೇನೆ ಎಂದು ಹೇಳಿದರು.