ಸಿದ್ದರಾಮಯ್ಯನಿಂದ ಕುರುಬರಿಗೆ ಅನ್ಯಾಯ- ಎಚ್.ಡಿ.ದೇವೇಗೌಡ

ಮಂಗಳವಾರ, 5 ಡಿಸೆಂಬರ್ 2017 (14:40 IST)
ಕುರುಬ ಸಮುದಾಯದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಕ್ಕಿದ್ದಾರೆ. ಆದರೆ, ಕುರುಬ ಸಮುದಾಯದವರಿಗೆ ಸೂಕ್ತ ಪ್ರಾತಿನಿಧ್ಯ ನೀಡದೇ ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ಬಳ್ಳಾರಿಗೆ ಭೇಟಿ ನೀಡಿ ಮಾತನಾಡಿದ ಅವರು, ಕುರುಬ ಸಮುದಾಯದವರಿಗೆ ಅಧಿಕಾರ ನೀಡದೇ ಎಲ್ಲವನ್ನೂ ತಾವೇ ನಿಭಾಯಿಸುತ್ತಿದ್ದಾರೆ. ಜನರ ತೆರಿಗೆ ಹಣವನ್ನು ದುಂದುವೆಚ್ಚ ಮಾಡುತ್ತಿದ್ದಾರೆ. 12 ಜನ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಅಗತ್ಯವೇನಿದೆ. 120 ನಿಗಮ ಮಂಡಳಿಗಳೂ ಆರ್ಥಿಕ ಭಾರವಾಗಿವೆ ಎಂದಿದ್ದಾರೆ.
 
ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದಾಗಲೇ ಕಾಂಗ್ರೆಸ್ ಜೊತೆ ಸೇರಿಕೊಂಡು ನನ್ನನ್ನು ತುಳಿಯಲು ಯತ್ನಿಸಿದ್ದರು. ಎಂ.ಪಿ.ಪ್ರಕಾಶ ಹಾಗೂ ಸಿದ್ದರಾಮಯ್ಯ ಜೆಡಿಎಸ್ ತೊರೆದರೆ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿದುಕೊಂಡಿದ್ದರು. ಪ್ರಾದೇಶಿಕ ಪಕ್ಷವನ್ನು ಉಳಿಸುವ ಕಾರ್ಯವನ್ನು ಕನ್ನಡಿಗರು ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ