ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು, ಕಾರಣ ಹೀಗಿದೆ

Sampriya

ಸೋಮವಾರ, 6 ಜನವರಿ 2025 (16:43 IST)
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿದ್ದಾರೆ.

ಮೃತ ಬಾಣಂತಿಯನ್ನು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ(24) ಎಂದು ಗುರುತಿಸಲಾಗಿದೆ.

ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಭಾನುವಾರ ಮೃತಪಟ್ಟಿದ್ದಾರೆ.  ಜನವರು 2ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು.  

ಸರಸ್ವತಿಗೆ ಹೆರಿಗೆ ಬಳಿಕ ರಕ್ತದೊತ್ತಡ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ಸರಸ್ವತಿ ಅವರ ಸಾವಿನಿಂದ ಕುಟುಂಬ ಆತಂಕಕ್ಕೆ ಒಳಗಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ