ಪಿಎಸ್‌ಐ ಅಸಹಜ ಸಾವು ಬೆನ್ನಲ್ಲೇ ಮತ್ತೋರ್ವ ಸಿಸಿಬಿ ಇನ್ಸ್‌ಸ್ಪೆಕ್ಟರ್ ಆತ್ಮಹತ್ಯೆ
ತಿಮ್ಮೇಗೌಡ ಅವರು ಒಂದು ತಿಂಗಳ ಹಿಂದೆಷ್ಟೇ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಪ್ರಕರಣ ಸಂಬಂಧ ರಾಮನಗರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಈಚೆಗೆ ಪ್ರಕರಣವೊಂದು ದಾಖಲಾಗಿತ್ತು. ಅದಲ್ಲದೆ
ಅಲ್ಲದೇ ಅತ್ತಿಬೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ತನಿಖೆ ನಡೆಯುತ್ತಿದೆ. ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.