ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು
ರಾಜ್ಯದ ವಿವಿಧ ಠಾಣೆಗಳಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ 44 ಪ್ರಕರಣ ದಾಖಲಾಗಿದೆ. ಇದರಲ್ಲಿ 22 ಪ್ರಕರಣಗಳ ಎಫ್ ಐಆರ್ ನಮ್ಮಲ್ಲಿದೆ. ಈತ ರೌಡಿಶೀಟರ್ ಅಗಿದ್ದರೂ ಇದುವರೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಈ ಸಂಬಂಧ ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಇಲ್ಲಿನ ಲಕ್ದ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು.