ಮತ್ತೊಂದು ಗೂಂಡಾಗಿರಿ: ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು ಆಪ್ತನ ಆಟಾಟೋಪ
ಬಿಬಿಎಂಪಿ ಕಚೇರಿಗೆ ಬಂದು ಜಮೀನಿಗೆ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಅಧಿಕಾರಿಗೆ ಒತ್ತಡ ಹಾಕಿದ್ದಾರೆ. ಆದರೆ ಅದಕ್ಕೆ ಅಧಿಕಾರಿಗಳು ಒಪ್ಪದಿದ್ದಾಗ ರೊಚ್ಚಿಗೆದ್ದ ನಾರಾಯಣಸ್ವಾಮಿ ಕಚೇರಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಲ್ಲದೆ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾನೆ. ಈ ವಿಡಿಯೋಗಳನ್ನು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.