ಬಸವರಾಜರಾಯರೆಡ್ಡಿಯವರು ಕಲಬುರಗಿ ಕ್ಷೇತ್ರದಿಂದ ಶಾಸಕರಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಪದೇ ಪದೇ ಕಾಂಗ್ರೆಸ್ ಪರವಾಗಿ ಪತ್ರಿಕಾಗೋಷ್ಠಿಗಳನ್ನು ಮಾಡಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸುತ್ತಿದ್ದರು. ಮಾಧ್ಯಮಗಳಲ್ಲೂ ರಾಷ್ಟ್ರೀಯ ವಿಚಾರಗಳೇ ಕುರಿತು ಹೆಚ್ಚು ಮಾತನಾಡುತ್ತಿದ್ದರು.
ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದರು. ಆದರೆ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಬಸವರಾಜರಾಯರೆಡ್ಡಿ ಅವರನ್ನು ಪರಿಗಣಿಸಿಲ್ಲವಾದ್ದರಿಂದ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.