ಬೆಳಗಾವಿ ಆಸ್ಪತ್ರೆಯಲ್ಲಿ ಮತ್ತೊಂದು ಬಾಣಂತಿ ಸಾವು, ಮಹಿಳೆಯರ ಜೀವಕ್ಕೆಲ್ಲಿದೆ ಗ್ಯಾರೆಂಟಿ?

Sampriya

ಸೋಮವಾರ, 23 ಡಿಸೆಂಬರ್ 2024 (15:38 IST)
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಬಾಣಂತಿ ಮಹಿಳೆಯರು ಹಾಗು ನವಜಾತ ಶಿಶುಗಳ ಸಾವು ರಾಜ್ಯ ಕಾಂಗ್ರೆಸ್ ಸರ್ಕಾರದ ಹೃದಯಹೀನತೆ, ಕ್ರೂರತೆಯನ್ನು ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿ 20ವರ್ಷದ ವೈಶಾಲಿ ಬಾಣಮತಿ ಸಾವನ್ನಪ್ಪಿದರು. ಈ ಪ್ರಕರಣ ಸಂಬಂಧ ಆರ್‌ ಅಶೋಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಬಣ ಬಡಿದಾಟ, ಕುರ್ಚಿ ಕಿತ್ತಾಟದಲ್ಲಿ ಸದಾ ಮಗ್ನವಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದ್ದು, ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಹೋಗುವ ಬಡ ಕುಟುಂಬಗಳ ಹೆಣ್ಣುಮಕ್ಕಳು ಜೀವಂತವಾಗಿ ಮನೆಗೆ ವಾಪಸ್ಸು ಬರುವ ಗ್ಯಾರೆಂಟಿ ಇಲ್ಲದಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ