ರಾಜ್ಯದಲ್ಲಿ ಮತ್ತೇ ಭಾರೀ ಮಳೆಯ ಮುನ್ಸೂಚನೆ, ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ

Sampriya

ಮಂಗಳವಾರ, 29 ಅಕ್ಟೋಬರ್ 2024 (16:33 IST)
ರಾಜ್ಯದಲ್ಲಿ ಕೆಲ ದಿನಗಳಲ್ಲಿ ಭಾರೀ ಅವಾಂತರ ಸೃಷ್ಟಿ ಮಾಡಿದ್ದ ಮಳೆ ಇದೀಗ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನೂ ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಅಂದಿನಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇಲ್ಲವಾದರೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇಂದು ರಾಜ್ಯದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಅದರಂತೆ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದೆ. ಇದೀಗ ಈಗಾಗಲೇ ಮಳೆಯ ಅವಾಂತರದಿಂದ ಸುಧಾರಿಸಿಕೊಳ್ಳುತ್ತಿರುವ ಮಂದಿಗೆ ಮತ್ತೇ ಮಳೆ ಆತಂಕ ಶುರುವಾಗಿದೆ. ನವೆಂಬರ್ 1 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ