ನಿನ್ನೆ ಬಜೆಟ್ ಮಂಡಿಸುವ ಮುನ್ನ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿರುವ ಬಗ್ಗೆ ಆಡಿಯೋ ರಿಲೀಸ್ ಮಾಡಿದ್ದರು. ಈ ಬಗ್ಗೆ ಈಗಾಗಲೇ ರಾಜಕೀಯ ವಲಯದಲ್ಲಿ ಬಾರೀ ಚರ್ಚೆ ನಡೆಯುತ್ತಿದೆ.
ಆದರೆ ಈ ನಡುವೆ ಇದೀಗ ಶಾಸಕ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ,’ ಸಿದ್ದರಾಮಯ್ಯ ಬಳಿ ಮತ್ತೊಂದು ಆಪರೇಷನ್ ಕಮಲದ ಆಡಿಯೋ ಇದೆ. ಅದನ್ನ ಅವರು ಬಿಡುಗಡೆ ಮಾಡಿಲ್ಲ. ಸಮಯ ಬಂದಾಗ ಬಿಡುಗಡೆ ಮಾಡುತ್ತಾರೆ’ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.