ಕೋರೊನಾ ಸೋಂಕು ಶಂಕಿತ ಮತ್ತೊಬ್ಬ ವ್ಯಕ್ತಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು

ಬುಧವಾರ, 4 ಮಾರ್ಚ್ 2020 (10:21 IST)
ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಆಂಧ್ರದ ಟೆಕ್ಕಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆ ಸೇರಿದ  ಬೆನ್ನಲೇ ಇದೀಗ ಮತ್ತೊಬ್ಬ ಶಂಕಿತ ವ್ಯಕ್ತಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ನಿನ್ನೆ ಸಂಜೆ ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಗೆ ಏರ್ ಪೋರ್ಟ್ ನಲ್ಲಿ ಪರೀಕ್ಷೆಯ ವೇಳೆ  ಜ್ವರ ಮತ್ತು ಕೆಮ್ಮು ಕಂಡುಬಂದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದೀಗ ಆತನಿಗೆ ಜ್ವರ ಕಡಿಮೆಯಾಗಿದ್ದು, ಆತನಿಗೆ ಸೋಂಕು ಇರುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ. ಆದರೆ ಈಗಾಗಲೇ ರಕ್ತಪರೀಕ್ಷೆ ಮಾಡಲಾಗಿದ್ದು , ರಕ್ತ ಪರೀಕ್ಷೆಯ ವರದಿ ಬಂದ ನಂತರವೇ ಈ ಬಗ್ಗೆ ತಿಳಿಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ