ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ಶನಿವಾರ, 25 ಸೆಪ್ಟಂಬರ್ 2021 (11:31 IST)
ಹುಬ್ಬಳ್ಳಿ : ತರಕಾರಿ ತರಲು ಹೋದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ತರಕಾರಿ ತರಲು ಅಂಗಡಿಗೆ ಬಂದ ಬಾಲಕಿಯನ್ನು ಪುಸಲಾಯಿಸಿ ಸುತ್ತಾಡಿಸಿ ನಂತರ ಕಾಲೇಜೊಂದರ ಸಮೀಪ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ