ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆ: ಮಾಜಿ ಸಂಸದನಿಗೆ ಪರಪ್ಪನ ಅಗ್ರಹಾರವೇ ಗತಿ

Sampriya

ಮಂಗಳವಾರ, 22 ಏಪ್ರಿಲ್ 2025 (17:05 IST)
Photo Courtesy X
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಪ್ರಕರಣ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಮತ್ತೊಂದು ಹಿನ್ನಡೆಯಾಗಿದೆ.

ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.  

ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ​ ಜಡ್ಜ್​ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹೀಗಾಗಿ ಪ್ರಜ್ವಲ್​ ರೇವಣ್ಣಗೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ.

ಕೆ.ಆರ್‌. ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.  

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್​ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್​ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್​ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು.  ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ತಂಡ ರಚಿಸಿತ್ತು. ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ 1,632 ಪುಟಗಳ ಚಾರ್ಚ್​​ಶೀಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ​ ಸಲ್ಲಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ