ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್

Sampriya

ಮಂಗಳವಾರ, 18 ಜೂನ್ 2024 (20:19 IST)
ಬೆಂಗಳೂರು: ನಿರಂತರವಾಗಿ ಜಲಮಂಡಳಿಯಲ್ಲಿ ನಷ್ಟ ಅನುಭವಿಸಿದ್ದರಿಂದ ಇದೀಗ 10 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಕುಡಿಯುವ  ನೀರಿನ ಶುಲ್ಕ ಏರಿಕೆ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಶುಲ್ಕ ಏರಿಕೆ ಮಾಡುವುದು ಅನಿವಾರ್ಯ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2014ರ ಬಳಿಕ ಕುಡಿಯುವ ನೀರಿನ ದರ ಏರಿಕೆ ಮಾಡಿಲ್ಲ. ವಿದ್ಯುತ್‌ ದರವೂ ಏರಿಕೆ ಆಗಿದೆ. ಜಲಮಂಡಳಿ ಸಿಬ್ಬಂದಿಗೆ ಸಂಬಳ ಕೊಡುವುದಕ್ಕೂ ಹಣವಿಲ್ಲ ಎಂದರು.

ಪ್ರತಿ ವರ್ಷವೂ ಜಲಮಂಡಳಿಗೆ ನಷ್ಟ ಆಗುತ್ತಲೇ ಇದೆ. ಆದರೆ ಬೆಂಗಳೂರಿಗೆ ಕುಡಿಯುವ ನೀರು ಬೇಕು. ನೀರಿನ ದರ ಹೆಚ್ಚು ಮಾಡಬೇಕಾ ಬೇಡವಾ ನೀವೇ ಹೇಳಿ. ಬಿಜೆಪಿಯವರು ಇದ್ದಾಗ ವಿದ್ಯುತ್‌ ದರ ಜಾಸ್ತಿ ಮಾಡಿದರು. ನಾವು ಬಂದು ಕಡಿಮೆ ಮಾಡಿದೆವು. ಕಡಿಮೆ ಮಾಡಿದ್ದಕ್ಕೆ ಪ್ರಶಂಸೆ ಮಾಡುವುದಿಲ್ಲ. ದರ ಹೆಚ್ಚಿಸಿದರೆ ಮಾತನಾಡುತ್ತೀರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ