ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಈ ಯೋಜನೆಯಡಿ 3 ಲಕ್ಷ ರೂ. ಸಾಲ ಸೌಲಭ್ಯ

ಭಾನುವಾರ, 5 ಡಿಸೆಂಬರ್ 2021 (19:38 IST)
ನವದೆಹಲಿ: ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಸರ್ಕಾರ ಪಶು ಸಂಗೋಪನೆ ಕೈಗೊಳ್ಳಲು ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಆರಂಭಿಸಿದೆ. ರೈತರು ಹಸು, ಎಮ್ಮೆ, ಮೇಕೆ, ಕುರಿ, ಹಂದಿ, ಕೋಳಿಗಳನ್ನು ಖರೀದಿಸಲು ಈ ಯೋಜನೆಯಡಿ ಸಾಲ ಪಡೆಯಬಹುದು.
ರೈತರಿಗೆ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 3 ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರಿಗೆ ಯಾವುದೇ ಗ್ಯಾರಂಟಿ ಇಲ್ಲದೇ ಪಶುಪಾಲನೆ ಕೈಗೊಳ್ಳಲು ಸಾಲ ಸೌಲಭ್ಯ ಒದಗಿಸಲಾಗುತ್ತದೆ.
ಅಂದ ಹಾಗೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮಾದರಿಯ ಈ ಯೋಜನೆಯಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಸಾಲಸೌಲಭ್ಯ ಒದಗಿಸಲಿದ್ದು, 1.60 ಲಕ್ಷ ರೂ. ವರೆಗೆ ಯಾವುದೇ ಗ್ಯಾರಂಟಿ ನೀಡಬೇಕಿಲ್ಲ.
ಹಸುವಿಗೆ 40,783 ಎಮ್ಮೆಗೆ 60,249 ರೂ. ನಿಗದಿ ಮಾಡಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ, ಪ್ಯಾನ್ ಕಾರ್ಡ್, ಮೊಬೈಲ್ ನಂಬರ್, ಪಾಸ್ಪೋರ್ಟ್ ಸೈಜ್ ಫೋಟೋ ಸೇರಿ ಅಗತ್ಯ ದಾಖಲೆ ನೀಡಬೇಕಿದೆ ಎಂದು ಹೇಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ