ಸರ್ಕಾರದ ವರ್ಗಾವಣೆಗೆ ದಂಧೆಗೆ ಮತ್ತೊಂದು ಬಲಿ: ಚನ್ನಾರೆಡ್ಡಿ ರಾಜೀನಾಮೆಗೆ ಶಾಸಕ ಯತ್ನಾಳ ಆಗ್ರಹ

Sampriya

ಶನಿವಾರ, 3 ಆಗಸ್ಟ್ 2024 (15:36 IST)
Photo Courtesy X
ಬೆಂಗಳೂರು: ಯಾದಗಿರಿ ಪೊಲೀಸ್ ಠಾಣೆಯಲ್ಲಿ ಮುಂದುವರಿಯಲು 30 ಲಕ್ಷ ಬೇಡಿಕೆಯಿಟ್ಟಿದ್ದರಿಂದ ಪಿಎಸ್‌ಐ ಪರಶುರಾಮ್ ಮೃತಪಟ್ಟಿದ್ದು, ಸರ್ಕಾರದ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯಾಗಿದೆ ಎಂದು ಬಿಜೆ‍‍ಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ)  ಅವರ ಹಣಕ್ಕೆ ಬೇಡಿಕೆಯಿಟ್ಟಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಯತ್ನಾಳ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪರಶುರಾಮ್ ಪತ್ನಿ ಶ್ವೇತಾ ನೀಡಿರುವ ದೂರಿನ ಪ್ರತಿಯನ್ನು ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಪಿಎಸ್‌ಐ ಪರಶುರಾಮ್ ಅವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ. ಕಳೆದ ಏಳು ತಿಂಗಳ ಹಿಂದಷ್ಟೇ ₹30 ಲಕ್ಷ ಹಣ ನೀಡಿ ನಗರ ಠಾಣೆಗೆ ವರ್ಗಾವಣೆಯಾಗಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ. ಈ ಪ್ರಕರಣದ ಕುರಿತು ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು' ಎಂದು ಆಗ್ರಹಿಸಿದ್ದಾರೆ.

ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ