ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ.ವೀಣಾ ಬಿಎಂಟಿಸಿ ಬಸ್ ಗೆ ಬಲಿಯಾದ ಮಹಿಳೆಯಾಗಿದ್ದು,ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ.
ರಸ್ತೆ ದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ವೀಣಾ ಸ್ಥಳದಲ್ಲೇ ಸಾವನಾಪ್ಪಿದ್ದು,ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.