ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಸಾವಿನ ಸಂಖ್ಯೆ 100ರ ಗಡಿ ದಾಟಿದೆ.
ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು , 54 ವರ್ಷದ ಮಹಿಳೆ ಕೊರೊನಾದಿಂದ ಸಾವನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆ ಸಾವನಪ್ಪಿದ್ದು, ಈ ಮಹಿಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಅದರಂತೆ ಬೆಂಗಳೂರಿನಲ್ಲಿ ಕೊರೊನಾದಿಂದ ಸಾವನಪ್ಪಿದವರ ಸಂಖ್ಯೆ 101ಕ್ಕೇರಿಕೆಯಾಗಿದೆ.