ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪೊಲೀಸ್ ಮೆಟ್ಟಿಲೇರಿದ ಮತ್ತೋರ್ವ ಮಹಿಳೆ

Sampriya

ಗುರುವಾರ, 2 ಮೇ 2024 (15:57 IST)
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದ್ದು, ಎಸ್‌ಐಟಿ ತಂಡ ತನಿಖೆಯನ್ನು ಕೈತ್ತಿಕೊಂಡಿದೆ.  

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಇದೀಗ ಮತ್ತೊಂದು ದೂರು ದಾಖಲಾಗಿದೆ.

ಏಪ್ರಿಲ್ 28ರಂದು ಮಾಜಿ ಮನೆ ಕೆಲಸದಾಕೆ ಹಾಗೂ ಅವರ ಮಗಳು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ಪೊಲೀಸರು ಆ ತನಿಖೆಯನ್ನು ಎಸ್‌ಐಟಿ ಹಸ್ತಾಂತರಿಸಿತ್ತು.  

ಇದರ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ