ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ನಡೆಯುವ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಕರ್ನಾಟಕ ಸರಕಾರದ ಅಡ್ವೊಕೇಟ್ ಜನರಲ್, ಸರಕಾರದ ಮುಖ್ಯಕಾರ್ಯದರ್ಶಿಗಳ ಸಹಿತ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.