ಅನುಪಮಾ ಶೆಣೈ ಹಠ ಹಿಡಿದಿರುವುದು ಸರಿಯಲ್ಲ: ಯಡಿಯೂರಪ್ಪ

ಗುರುವಾರ, 9 ಜೂನ್ 2016 (19:54 IST)
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ರಾಜೀನಾಮೆ ಹಿಂಪಡೆಯಲು ಹಠ ಹಿಡಿದಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಸೇವೆಯಲ್ಲಿ ಮುಂದುವರೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜೀನಾಮೆ ಹಿಂಪಡೆಯಲು ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಇಷ್ಟು ಹಠ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
 
ಇದೇ ವೇಳೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ವಿಧಾನ ಪರಿಷತ್‍ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು ಒಟ್ಟಾಗಿ ಮತದಾನ ಮಾಡಲಿದ್ದಾರೆ. ಪಕ್ಷೇತರ ಶಾಸಕರು ಸಹ ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಬೆಂಬಲಿಸಲಿದ್ದು, ತಮ್ಮ ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ