ಚಿಕ್ಕಮಗಳೂರು : ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರ ಹಾಗೂ ವಿವಾದಿತ ಪ್ರದೇಶವೂ ಆಗಿರುವ ದತ್ತಪೀಠದ ಆಡಳಿತಕ್ಕೆ ರಾಜ್ಯ ಸರ್ಕಾರ ನೇಮಕ ಮಾಡಿದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ ಕೇಳಿ ಬಂದಿದೆ.
ಸಮಿತಿಯಲ್ಲಿ ಎರಡು ಸಮುದಾಯಕ್ಕೆ ಸೇರಿದ ಎಂಟು ಜನರಿರಬೇಕಿತ್ತು. ಆದರೆ, ಒಂದೇ ಸಮುದಾಯಕ್ಕೆ ಸೇರಿದ ಏಳು ಜನರಿದ್ದಾರೆ. ಈ ಸಮಿತಿ ಮೇಲೆ ನಂಬಿಕೆ ಇಲ್ಲ. ಕೂಡಲೇ ಈ ಸಮಿತಿಯನ್ನು ಅನೂರ್ಜಿತಗೊಳಿಸಬೇಕೆಂದು ಕೋಮು ಸೌಹಾರ್ದ ವೇದಿಕೆ ಆಗ್ರಹಿಸಿದೆ.
ನಗರದಲ್ಲಿ ಮಾತನಾಡಿದ ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್, ಸಮಿತಿಯಲ್ಲಿ ಏಳು ಮಂದಿ ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಕಮಿಟಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.