ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟಕ್ಕೆ ಮನವಿ: ಪರ- ವಿರೋಧ ಚರ್ಚೆ ಜೋರು

Sampriya

ಶನಿವಾರ, 7 ಡಿಸೆಂಬರ್ 2024 (19:47 IST)
Photo Courtesy X
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಬಾಡೂಟ ಯಾಕಿಲ್ಲ ಸ್ವಾಮಿ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಸಸ್ಯಹಾರದ ಜತೆಗೆ ಬಾಡೂಟವನ್ನು ಹಾಕಿಸಬೇಕೆಂದು ಒತ್ತಾಯ ಮಾಡುತ್ತಿರುವ ಬೆಳವಣಿಗೆ ಕಂಡುಬಂದಿದೆ.  

ಸಮ್ಮೇಳನದಲ್ಲಿ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗಳನ್ನು ಆನ್‌ಲೈನ್‌ ಮೂಲಕ ಕಾಯ್ದಿರಿಸಿದವರಿಗೆ 'ಮಾಂಸಾಹಾರ, ಮದ್ಯ ಮತ್ತು ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ' ಎಂಬ ಸೂಚನೆ ಕೊಡಲಾಗಿದೆ. ಇದರ ಬೆನ್ನಲ್ಲೇ, ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕೆಲವರು ಇದು ಮಡಿ ಸಾಹಿತ್ಯ ಸಮ್ಮೇಳನವೇ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು ಸಸ್ಯಾಹಾರ-ಮಾಂಸಾಹಾರ ನಡುವಿನ ಮೇಲು-ಕೀಳು ತಾರತಮ್ಯ ಮನೋಭಾವವನ್ನು ವಿನಾಶಗೊಳಿಸಬೇಕು ಎಂದು ಕೆಲವರು ಪೋಸ್ಟರ್‌ ಹಿಡಿದು ಒತ್ತಾಯಿಸಿದ್ದಾರೆ.

ಇನ್ನೂ ಕೆಲವರು ಬಾಡೂಟ ಅಭಿಯಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ