ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಗುರುವಾರ, 16 ಸೆಪ್ಟಂಬರ್ 2021 (11:32 IST)
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 2021-22 ನೇ ಸಾಲಿನ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಹಿಂದುಳಿದ ವರ್ಗಗಳ ಆಯೋಗಗಳ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2 ಎ, 2 ಬಿ, 3 ಎ,3 ಬಿ. ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 22:10:2021 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು www.bcwd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಅಥವಾ ಏನಾದರೂ ಮಾಹಿತಿ ಬೇಕಿದ್ದಲ್ಲಿ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ. ಅಥವಾ ಸಹಾಯವಾಣಿ ಸಂಖ್ಯೆ 080-8050370006 ಸಂಪರ್ಕಿಸಬಹುದಾಗಿದೆ.