ವಿದ್ಯಾರ್ಥಿ ಬಸ್​ ಪಾಸ್​ ವಿತರಣೆಗೆ ಅರ್ಜಿ ಆಹ್ವಾನ

ಶನಿವಾರ, 8 ಜುಲೈ 2023 (17:40 IST)
ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆಗೆ BMTC ಅರ್ಜಿ ಆಹ್ವಾನ ಮಾಡಿದೆ. 2023-24ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಾಗಿ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿಗಳಿಗೆ ಪಾಸ್ ಸಿಗಲಿದೆ. ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದ್ದು, ಪುರುಷ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಸಿಗಲಿದೆ.. ವಿದ್ಯಾರ್ಥಿ ಪಾಸ್‌ಗಳನ್ನು ಬೆಳಗ್ಗೆ 8ಗಂಟೆಯಿಂದ ಸಂಜೆ 6.30ರವೆರೆಗೆ ನೀಡಲಾಗುತ್ತಿದೆ.. ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ