ಕ್ಲರಿಕಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ - ತರಬೇತಿ

ಭಾನುವಾರ, 18 ಡಿಸೆಂಬರ್ 2016 (06:05 IST)
ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ರವರು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು 442  ಮತ್ತು ದ್ವಿತೀಯ ದರ್ಜೆ ಸಹಾಯಕರು 381 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 
 
ಅರ್ಜಿ ಸಲ್ಲಿಸಲು ಜನವರಿ 4, 2017 ಕಡೆ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಿರುವ ಮತ್ತು ಸಲ್ಲಿಸಲಿರುವ ಅಭ್ಯರ್ಥಿಗಳಿಗಾಗಿ ಲಿಖಿತ ಪರೀಕ್ಷಾ ಪೂರ್ವ ಭಾವಿ ತರಬೇತಿ ಶಿಬಿರವನ್ನು ಉಚಿತವಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಇಲಾಖೆಯ ಮಹತ್ವಾ ಕಾಂಕ್ಷಿ ಕಾರ್ಯಕ್ರಮವಾದ ಸ್ಟಡಿ ಸರ್ಕಲ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. 
 
ಪರೀಕ್ಷಾ ಪೂರ್ವ ತರಬೇತಿ ಶಿಬಿರದಲ್ಲಿ ಅನುಭವಿ ನುರಿತ ಉಪನ್ಯಾಸಕರಿಂದ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ. ತರಬೇತಿ ಶಿಬಿರದ ಸದುಪಯೋಗವನ್ನು ಪಡೆಯಲು ಇಚ್ಚಿಸುವ ತಕ್ಷಣ ಈ ಕಚೆರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವುದು ಹಾಗೂ ಅಭ್ಯರ್ಥಿಗಳು ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಹೆಚ್ಚಿನ ಅನುಭವ ಪಡೆಯುವಂತೆ ಕೋರಲಾಗಿದೆ.
 
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೆರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08172-268374  ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ