ಹೊಸ ಎಪಿಎಲ್-ಬಿಪಿಎಲ್ ರೇಷನ್ ಕಾರ್ಡ್ ಮಾಡಿಸುವವರಿಗೆ ಗುಡ್ ನ್ಯೂಸ್: ಹೀಗೆ ಅರ್ಜಿ ಸಲ್ಲಿಸಿ

Krishnaveni K

ಶನಿವಾರ, 14 ಸೆಪ್ಟಂಬರ್ 2024 (10:36 IST)
ಬೆಂಗಳೂರು: ಹೊಸದಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಿದೆ. ಹೇಗೆ ಅರ್ಜಿ ಸಲ್ಲಿಸುವುದು ಇಲ್ಲಿದೆ ವಿವರ.

Ahara.kar.nic.in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಮೊಬೈಲ್, ಕಂಪ್ಯೂಟರ್, ಸೇವಾ ಸಿಂಧು ಪೋರ್ಟಲ್ ಗಳಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ರಾಜ್ಯ ಸರ್ಕಾರ ಪಡಿತರ ಚೀಟಿಯಲ್ಲಿ ಬಿಪಿಎಲ್ ಕಾರ್ಡ್ ಅರ್ಹರು ಯಾರು ಎಂದು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಹಲವರ ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಲಿದೆ.

ಈ ನಡುವೆ ಸರ್ಕಾರದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಹೊಸ ರೇಷನ್ ಕಾರ್ಡ್ ಗಳ ವಿತರಣೆ ಸೆಪ್ಟೆಂಬರ್ 15 ರಿಂದ 30 ನೇ ತಾರೀಖಿನೊಳಗೆ ಮಾಡಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು.  ಕುಟುಂಬದ ಆದಾಯಕ್ಕೆ ಅನುಗುಣವಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಎಂದು ನಿರ್ಧಾರವಾಗಲಿದೆ.

ಬೇಕಾಗುವ ದಾಖಲೆಗಳು
ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ
Ahara.kar.nic.in ವೆಬ್ ಸೈಟ್ ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಲಿಂಕ್ ಸಿಗುತ್ತದೆ. ಈ ಮೇಲೆ ಹೇಳಿದ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ