ಜು.3 ರೊಳಗೆ ವಿಪಕ್ಷ ನಾಯಕರ ನೇಮಕ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜುಗಲ್ ಬಂದಿಗೆ ಸವಾಲ್ ಹಾಕುವ ವಿಪಕ್ಷ ನಾಯಕನನ್ನು ಆರಿಸ್ತೇವೆ. ಅಧಿವೇಶನ ಪ್ರಾರಂಭವಾಗುವ ಮುನ್ನವೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಬೇಕಿತ್ತು.
ಸೋಲಿನ ಪರಾಮರ್ಶೆ ಹಾಕಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕೆಂದಿರುವುದರಿಂದ ತಡವಾಗಿದೆ. ಜುಲೈ 3 ರೊಳಗೆ ಒಳ್ಳೆ ವಿಪಕ್ಷ ನಾಯಕನ ಆಯ್ಕೆ ಆಗಲಿದೆ. ನಮ್ಮ ರಾಷ್ಟ್ರೀಯ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ ಆಯ್ಕೆ ಮಾಡುತ್ತಾರೆ.
ನಮ್ಮ ಪಕ್ಷದಲ್ಲಿ ಒಂದು ಶಿಸ್ತು ಇದೆ. ಈ ಪ್ರಕಾರ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕ ಯಾರಾಗಬೇಕು ಎಂದು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದರು.