ಸಚಿವೆ ಶಶಿಕಲಾ ಜೊಲ್ಲೆ ಮಾಡಿದ ಕೆಲಸಕ್ಕೆ ಮೆಚ್ಚುಗೆ – ಅದೇನು ಕೆಲಸ?
ಪ್ರಥಮ ಚಿಕಿತ್ಸೆ ನೀಡಿ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಿದ್ದಾರೆ ಸಚಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಟೋಲ್ ನಾಕಾ ಬಳಿ ಈ ಘಟನೆ ನಡೆದಿದೆ.
ಕಾಗವಾಡ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸುವ ವೇಳೆಗೆ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೆ ಒಳಗಾದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.