ಹಠಾತ್ ಹೃದಯಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ಹೃದಯಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಯೋಜನೆಗೆ ಮುಂದಾಗಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಪ್ಪು ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದಿದ್ದಾರೆ. ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ.
ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators ಅಳವಡಿಕೆ ಮಾಡಲಾಗುತ್ತೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಏರಪೋರ್ಟ್ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ AED ಅಳವಡಿಕೆ ಮಾಡುತ್ತೇವೆ.
ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೆ, ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುತ್ತೆ. ಗೋಲ್ಡನ್ ಟೈಮ್ ನಲ್ಲಿ ಟ್ರೀಟ್ ಮೆಂಟ್ ಬಳಿಕ ಆಸ್ಪತ್ರೆಗೆ ಶೀಫ್ಟ್ ಮಾಡಬಹುದು. ರೋಗಿಯನ್ನ ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.
ಹೃದಯಘಾತದ ಸಮಯದಲ್ಲಿ ಆಸ್ಪತ್ರೆಗೆ ಶಿಫ್ಟ್ ವೇಳೆಯಲ್ಲಿಯೇ ಡೆತ್ ಆಗ್ತೀವೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೇ ಹೃದಯಾಘಾತ ತಪ್ಪಿಸಲು ಮೆಡಿಸಿನ್ ಗಳನ್ನ ಪೂರೈಸಲಾಗುವುದು.
ಯಾರಿಗೆ ಹೃದಘಾತದ ಸೂಚನೆ ಬಂದರೆ ತಕ್ಷಣ ಸಂಬಂಧಿಸಿದ ಔಷಧಿ ನೀಡಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗುವುದು. ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.