ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

Krishnaveni K

ಬುಧವಾರ, 1 ಏಪ್ರಿಲ್ 2026 (14:08 IST)
ಬಾಗಲಕೋಟೆ: ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅಹಿಂದ ನಾಯಕ ಎಂದು ಪದೇ ಪದೇ ಹೇಳಿಕೊಳ್ಳುತ್ತಾರೆ. ಅಹಿಂದ ಸಮುದಾಯಕ್ಕೆ, ದಲಿತ ಸಮುದಾಯಗಳಿಗೆ ಅನ್ಯಾಯ ಆಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದ್ದಾರೆ.
 
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ನಾವು ಎಸ್‍ಸಿ, ಎಸ್‍ಟಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಿದ್ದೆವು. ಅದನ್ನು ಈ ಸರಕಾರ ಕಡಿಮೆ ಮಾಡಿದೆ. ಈ ದೊಡ್ಡ ಕೊಡುಗೆಯನ್ನು ಸಿದ್ದರಾಮಯ್ಯನವರ ಸರಕಾರ ನೀಡಿದೆ ಎಂದು ವ್ಯಂಗ್ಯವಾಡಿದರು. ಈ ಸಮಾಜವನ್ನು ತ್ರಿಶಂಕು ಸ್ಥಿತಿಗೆ ತಳ್ಳಿದ್ದಾರೆ ಎಂದು ಟೀಕಿಸಿದರು.
 
ಎಸ್‍ಸಿ, ಎಸ್‍ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲು ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಉಚಿತ ಯೋಜನೆಗಳಿಗೆ ಹಣ ಬಳಸಿಕೊಳ್ಳಲು ಆರಂಭಿಸಿದ್ದಾರೆ ಎಂದು ದೂರಿದರು. ಒಳ ಮೀಸಲಾತಿಯಲ್ಲೂ ಗೊಂದಲ ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ಜನವಿರೋಧಿ, ದಲಿತ ವಿರೋಧಿ ನೀತಿಗೆ ಜನತೆ ಎರಡೂ ಕಡೆಗಳಲ್ಲಿ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಯುವಜನರ ಹಿತದೃಷ್ಟಿಯಿಂದ ತಕ್ಷಣವೇ ಖಾಲಿ ಹುದ್ದೆ ಭರ್ತಿ ಮಾಡಲು ಆಗ್ರಹಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ